ಪಾಂಗ್ಲಾಯಿ ಬೆಥನಿ ಆ.ಮಾ.ಶಾಲೆಯ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿ ಇಸ್ಮಾಯಿಲ್ ಶಾಫಿ ಆಯ್ಕೆ

0

ಪುತ್ತೂರು: ಪಾಂಗ್ಲಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 2024-25ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯು ಪುತ್ತೂರು ಬೆಥನಿ ಶಿಕ್ಷಣ ಸಂಸ್ಥೆಗಳ ಸಂಚಾಲಕಿ ಸಿಸ್ಟರ್ ಪ್ರಶಾಂತಿರವರ ನೇತೃತ್ವದಲ್ಲಿ ನಡೆಯಿತು.


ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ನೂತನ ಉಪಾಧ್ಯಕ್ಷರಾಗಿ ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಭೌತವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಇಸ್ಮಾಯಿಲ್ ಶಾಫಿ, ಮಕ್ಕಳ ಸುರಕ್ಷಾ ಸಮಿತಿಯ ಅಧ್ಯಕ್ಷರಾಗಿ ಪ್ರತಿಕ್ಷ ಪೈ, ಉಪಾಧ್ಯಕ್ಷರಾಗಿ ಪುಷ್ಪರಾಜ್ ಗಂಭೀರ್ ಆಯ್ಕೆಯಾದರು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಸೆಲಿನ್ ಪೇತ್ರ ಶಾಲಾ ವಾರ್ಷಿಕ ಯೋಜನೆಯನ್ನು ಸಭೆಯ ಮುಂದಿಟ್ಟರು. ಸಹ ಶಿಕ್ಷಕಿ ಗ್ರೀಷ್ಮ ಸ್ವಾಗತಿಸಿ, ಶರಲ್ ವಂದಿಸಿದರು. ವೀಣಾ ಹಾಗೂ ಅನ್ವಿತಾ ನಿರೂಪಿಸಿದರು.

LEAVE A REPLY

Please enter your comment!
Please enter your name here