ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಕೂಡುಕಟ್ಟಿನ ಭಕ್ತರ ಮಹಾಸಭೆ

0

ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನ ದೇವಸ್ಥಾನದಲ್ಲಿ ಕೂಡುಕಟ್ಟಿನ ಭಕ್ತರ ಮಹಾಸಭೆಯು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದೇವಾಲಯದ ಆಡಳಿತಾಧಿಕಾರಿ, ಕಾಣಿಯೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರಘು ಎನ್. ಬಿ ವಹಿಸಿದ್ದರು.

ಸರಕಾರದ ಆದೇಶದ ಪ್ರಕಾರ ಮುಂದಿನ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಒಂಬತ್ತು ಮಂದಿಯನ್ನು ಭಕ್ತರ ಸಮ್ಮುಖದಲ್ಲಿ ಆಯ್ಕೆ ಮಾಡಿ ಧಾರ್ಮಿಕ ದತ್ತಿ ಇಲಾಖೆಗೆ ಕಳುಹಿಸಿಕೊಡಲು ತೀರ್ಮಾನಿಸಲಾಯಿತು.

ಈ ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಜೋಡು ದೈವಗಳ ಆಡಳಿತದಾರ ಕುಸುಮಾದರ ರೈ ಕಾಸ್ಪಾಡಿಗುತ್ತು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಮಾಜಿ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಧನಂಜಯ ಕೇನಾಜೆ, ಕಾಣಿಯೂರು ಗ್ರಾಮ ಪಂಚಾಯತ್ ಸಿಬ್ಬಂದಿ ತಿಮ್ಮಪ್ಪ ಗೌಡ ಬೀರುಕುಡಿಕೆ, ಆಡಳಿತ ಪಂಗಡದ ಅಧ್ಯಕ್ಷ ಕುಸುಮಾದರ ಬೀರೋಳಿಗೆ, ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಎಂಟು ಮನೆಯವರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿಯ ಸದಸ್ಯ ವಸಂತ ದಲಾರಿ ಸ್ವಾಗತಿಸಿ, ಜೀರ್ಣೋದ್ಧಾರ ಸಮಿತಿಯ ಸದಸ್ಯ ಗೋಪಾಲಕೃಷ್ಣ ಬಾರೆಂಗಳ ವಂದಿಸಿದರು.

LEAVE A REPLY

Please enter your comment!
Please enter your name here