ಪುತ್ತೂರು: ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ’ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಪೂರಕವಾಗಿ ಪುತ್ತೂರು ಬಿಜೆಪಿಯಿಂದ ತಿರಂಗಾ ಅಭಿಯಾನವು ಆ.13ರಂದು ನಡೆಯಿತು.
ರಾಷ್ಟ್ರಧ್ವಜದೊಂದಿಗೆ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿಯಿಂದ ಹೊರಟು ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರ ಪ್ರತಿಮೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಹಾರಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಗಾಂಧಿಕಟ್ಟೆಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮತ್ತು ಕಿಲ್ಲೆ ಮೈದಾನದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ತಿರಂಗ ಅಭಿಯಾನ ಸಮಾಪನಗೊಂಡಿತು.
ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ನಿರಂತರ ತಿರಂಗಾ ಅಭಿಯಾನ ಮಾಡಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ವಿಚಾರಧಾರೆ, ರಾಷ್ಟ್ರೀಯತೆಯಲ್ಲಿ ಬದ್ದರಾಗಿದ್ದು ಕೆಲಸ ಮಾಡುತ್ತಿದೆ ಎಂದರು.
ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಜಯಶ್ರೀ ಎಸ್ ಶೆಟ್ಟಿ, ನಿತೀಶ್ ಕುಮಾರ್ ಶಾಂತಿವನ, ಹಿರಿಯರಾದ ಎಸ್ ಅಪ್ಪಯ್ಯ ಮಣಿಯಾಣಿ, ಉಮೇಶ್ ಶೆಣೈ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ರಾಜ್ಯ ಒಬಿಸಿ ಮೋರ್ಚಾದ ಕಾರ್ಯದರ್ಶಿ ಆರ್.ಸಿ.ನಾರಾಯಣ, ಭಾಮಿ ಅಶೋಕ್ ಶೆಣೈ, ವಿದ್ಯಾ ಗೌರಿ, ಗೌರಿ ಬನ್ನೂರು, ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಜೇಶ್ ಬನ್ನೂರು, ಉಮೇಶ್ ಕೋಡಿಬೈಲು, ಉದಯ ಹೆಚ್, ರಾಧಾಕೃಷ್ಣ ನಂದಿಲ, ಮುರಳಿಕೃಷ್ಣ ಹಸಂತಡ್ಕ, ಹರೀಶ್ ಬಿಜತ್ರೆ ಸಹಿತ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ನಗರಸಭೆ ಪಟ್ಟಣ ಪಂಚಾಯತ್, ಪಕ್ಷದ ಪ್ರಮುಖರು, ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಂಡರು. ತಿರಂಗಾ ಅಭಿಯಾನದ ಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ ಮತ್ತು ಯುವರಾಜ್ ಪೆರಿಯತ್ತೋಡಿ ಅವರು ಕಾರ್ಯಕ್ರಮ ನಿರ್ವಹಿಸಿದರು.