ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ – ಅಂಗಡಿ ಮಾಲಕನ ವಿರುದ್ಧ ಪ್ರಕರಣ ದಾಖಲು

0

ವಿಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಂಗಡಿ ಮಾಲಕನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


ಕುದ್ದುಪದವು ಸಮೀಪದ ಅಂಗಡಿಯೊಂದಕ್ಕೆ ತೆರಳಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳಿಗೆ ಅಂಗಡಿ ಮಾಲಕ ಅಶ್ರಫ್ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here