





ಪುತ್ತೂರು: 2023-24ನೇ ಆರ್ಥಿಕ ವರ್ಷಕ್ಕೆ ಸಾಲ ವಸೂಲಾತಿ ಸೇರಿದಂತೆ ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗಣನೀಯ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಪ್ರೋತ್ಸಾಹಕ ಪ್ರಶಸ್ತಿ ಗೌರವ ಪ್ರದಾನ ಆ.14ರಂದು ನಡೆಯಿತು.ಮಂಗಳೂರಿನಲ್ಲಿ ನಡೆದ ಎಸ್ಸಿಡಿಸಿಸಿ ಬ್ಯಾಂಕ್ನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಹಕಾರ ಸಂಘವು ಸತತ 7ನೇ ಬಾರಿಗೆ ಪ್ರಶಸ್ತಿ ಪಡೆದುಕೊಂಡಿದೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್, ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ದೇರ್ಲ, ಉಪಾಧ್ಯಕ್ಷರಾದ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು, ಎಸ್ಸಿಡಿಸಿಸಿ ವಲಯ ಮೇಲ್ವಿಚಾರಕರಾದ ಶರತ್ ಡಿ ಉಪಸ್ಥಿತರಿದ್ದರು.











