ಆ.21: ಪುತ್ತೂರು ತಾಲೂಕಿನ ಸ.ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ

0

ನಗರ ಪೊಲೀಸ್ ಠಾಣೆಯ ಎಸ್.ಐ ಆಂಜನೇಯ ರೆಡ್ಡಿಯವರ ಮುಂದಾಳತ್ವ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಆಂಜನೇಯ ರೆಡ್ಡಿಯವರ ಮುಂದಾಳತ್ವದಲ್ಲಿ ಕೊಂಬೆಟ್ಟು ಪ.ಪೂ ಕಾಲೇಜು ಪ್ರೌಢಶಾಲಾ ವಿಭಾಗದ ಸಹಯೋಗದಲ್ಲಿ ಪುತ್ತೂರು ತಾಲೂಕಿನ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ರಸಪ್ರಶ್ನೆಯನ್ನು ಆಯೋಜಿಸಲಾಗಿದ್ದು, ಈ ಸ್ಪರ್ಧೆಗೆ ಶಾಲೆಗಳಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ.

ಆ.21ಕ್ಕೆ ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ಈ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ನಗದು ಬಹುಮಾನ ನೀಡಲಾಗುವುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here