





ಪುತ್ತೂರು: ನರಿಮೊಗರು ಮರಾಟಿ ಸಮಾಜ ಸೇವಾ ಸಂಘದಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.


ಸಂಘದ ಅಧ್ಯಕ್ಷರಾದ ಮಹಾಲಿಂಗ ನಾಯ್ಕ ನರಿಮೊಗರುರವರು ಧ್ವಜಾರೋಹಣ ಮಾಡಿ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಹಾಗೂ ದೇಶದ ವೀರ ಯೋಧರ ಗುಣಗಾನ ಮಾಡಿದರು. ಇಂದು ನಮ್ಮ ದೇಶದ ಯುವ ಜನತೆ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರ ಬಗ್ಗೆ ಅರಿತುಕೊಂಡು ಬಲಿದಾನ ಗೈದವರ ತ್ಯಾಗವನ್ನು ಇಂದಿನ ಯುವ ಪೀಳಿಗೆಗಳಿಗೆ ತಿಳಿಸುವ ಮೂಲಕ ಅರಿವು ಮೂಡಿಸಬೇಕಾಗಿದೆ ಎಂದರು. ಸಂಘದ ಮಾಜಿ ಕಾರ್ಯದರ್ಶಿ ಯೋಗೀಶ್ ಶಾಂತಿಗಾಡುರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಕೃಷ್ಣ ನಾಯ್ಕ ಎನ್ ವಂದಿಸಿದರು. ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರುಗಳು ಹಾಗೂ ಸಮಾಜ ಭಾಂದವರು ಬಾಗವಹಿಸಿದ್ದರು.













