ಬಡಗನ್ನೂರು ಗ್ರಾ.ಪಂ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

ಬಡಗನ್ನೂರುಃ ಬಡಗನ್ನೂರು ಗ್ರಾ.ಪಂ ನಲ್ಲಿ 78 ನೆ ಸ್ವಾತಂತ್ರ್ಯೋತ್ಸವ ಆಚರಣೆ ಅ.15 ರಂದು ಆಚರಣೆ ಮಾಡಲಾಯಿತು. ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ  ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಸುಶೀಲಾ ಪಕ್ಯೋಡ್, ಸದಸ್ಯರಾದ ಸಂತೋಷ್ ಆಳ್ವ,  ವೆಂಕಟೇಶ ಕನ್ನಡ್ಕ, ಕುಮಾರ ಅಂಬಟೆಮೂಲೆ, ಶ್ರೀಮತಿ ಕನ್ನಡ್ಕ, ಸುಜಾತ ಮೈಂದನಡ್ಕ, ಜ್ಯೋತಿ ಅಂಬಟೆಮೂಲೆ, ಸವಿತಾ ನೇರೋತ್ತಡ್ಕ  ಪ್ರಭಾರ ಅಭಿವೃದ್ಧಿ ಅಧಿಕಾರಿ ಮೋನಪ್ಪ ಕೆ, ಹಾಗೂ ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತರು, ಶಾಲಾ ಮಕ್ಕಳು ಮತ್ತು ಊರಿನವರು ಉಪಸ್ಥಿತರಿದ್ದರು. 

LEAVE A REPLY

Please enter your comment!
Please enter your name here