ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು.

ಭಟ್ಸ್ ನರ್ಸಿಂಗ್ ಹೋಮ್ ಉಪ್ಪಿನಂಗಡಿ, ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ. ಸುಪ್ರೀತ್ ಜೆ ಲೋಬೊ ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿದರು. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಹಿತಾಶ್ರೀ ಹಾಗೂ ಆಂಗ್ಲ ಭಾಷಾ ಉಪನ್ಯಾಸಕಿ ಯಶಸ್ವಿನಿ ಎಮ್ ಇವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಇಂದ್ರಪ್ರಸ್ಥ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಕರುಣಾಕರ ಸುವರ್ಣ, ಸಂಚಾಲಕ ಸುಬ್ರಹ್ಮಣ್ಯ ಭಟ್ ಕೆದಿಲ, ಪ್ರಾಂಶುಪಾಲ ಹೆಚ್ ಕೆ ಪ್ರಕಾಶ್, ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ವೀಣಾ ಆರ್ ಪ್ರಸಾದ್, ವಿದ್ಯಾಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂಧಿಗಳು ಉಪಸ್ಥಿತರಿದ್ದರು. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೈನಶ್ರೀ ಎಮ್ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here