ಸುದಾನ ಸಮೂಹ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ

0

ಪುತ್ತೂರು: ಪುತ್ತೂರಿನ ಸುದಾನ ವಸತಿ ಶಾಲೆ ಮತ್ತು ಪದವಿಪೂರ್ವ ವಿಭಾಗವು ಜೊತೆಗೂಡಿ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿತು. ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಉಜಿರೆ ಎಸ್.ಡಿ.ಎಂ ಕಾಲೇಜಿನ ಉಪನ್ಯಾಸಕಿ ಹರಿಣಿ ಪುತ್ತೂರಾಯ ಧ್ವಜಾರೋಹಣವನ್ನು ಮಾಡಿ ಮಾತನಾಡಿ “ಭಾರತದ ಸ್ವಾತಂತ್ರ್ಯಕ್ಕೋಸ್ಕರ ಹುತಾತ್ಮರಾದ ದೇಶಪ್ರೇಮಿಗಳಿಗೆ ಗೌರವ ನಮನವನ್ನು ಸಲ್ಲಿಸುವುದರ ಜೊತೆಗೆ ಈ ದೇಶದ ಏಕತೆ ಮತ್ತು ರಕ್ಷಣೆಯನ್ನು ಕಾಪಾಡುವಲ್ಲಿ ನಮಗಿರುವ ಹೊಣೆಗಾರಿಕೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಮುಂದಿನ ಪ್ರಜೆಗಳಾಗಿ ಬೆಳೆವ ಮಕ್ಕಳು ವಿಕಸಿತ ಭಾರತವನ್ನು ನಿರ್ಮಿಸುವುದಕ್ಕೆ  ಪ್ರತಿಜ್ಞಾಬದ್ಧರಾಗಬೇಕು ಎಂದು ನುಡಿದರು. “78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಈ ಹೊತ್ತಿನಲ್ಲಿ ಭಾರತಕ್ಕಾಗಿ ನಾವೇನು ಮಾಡಬೇಕು ಎನ್ನುವುದರ ಬಗ್ಗೆ ಯೋಚಿಸಬೇಕು. ಪ್ರತಿಯೊಬ್ಬ ಪ್ರಜೆಯೂ ಪ್ರಜ್ಞಾವಂತನಾಗುವ ಮೂಲಕ ದೇಶಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸುದಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುಪ್ರೀತ್ ಅವರು ಕರೆ ನೀಡಿದರು”

ವಿದ್ಯಾರ್ಥಿನಿ ಶರಲ್ ರೀಮಾ ಮಾರ್ಟಿಸ್ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸುತ್ತಾ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನ ಮತ್ತು ಶ್ರಮವು ಸಾರ್ಥಕವಾಗ ಬೇಕಾದರೆ ನಾವೆಲ್ಲರೂ ದೇಶದ ಅಭಿವೃದ್ಧಿಗಾಗಿ ದುಡಿಯಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿನಿ ತರ್ಷಿಣಿ ಸ್ವಾಗತಿಸಿ, ವಿದ್ಯಾರ್ಥಿ ಎ. ವರುಣ್ ವಂದಿಸಿದರು. ವಿದ್ಯಾರ್ಥಿನಿ ಅನಘ ಮುಖ್ಯ ಅಭ್ಯಾಗತರನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಫಾತಿಮತ್ ರಿಂಶಾ, ಅವನಿ ರೈ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್, ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ರೊ. ಆಸ್ಕರ್ ಆನಂದ್, ಮುಖ್ಯ ಶಿಕ್ಷಕಿ. ಶೋಭಾ ನಾಗರಾಜ್, ಶುಭಾಶಂಸನೆಗೈದರು. ಸಭಾ ಕಾರ್ಯಕ್ರಮದ ಬಳಿಕ ಸುದಾನ ಸಮೂಹ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಂದ ದೇಶ ಭಕ್ತಿ ನೃತ್ಯ, ಗೀತಗಾಯನವು ನಡೆಯಿತು. ಶಾಲೆಯ ಸೋಶಿಯಲ್ ಕ್ಲಬ್ ಹಾಗೂ ಸ್ಪೋರ್ಟ್ ಕ್ಲಬ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

LEAVE A REPLY

Please enter your comment!
Please enter your name here