ಕೆದಂಬಾಡಿ ಗ್ರಾಪಂನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆ ಧ್ವಜಾರೋಹಣ ನೆರವೇರಿಸಿ ಶುಭ ಸಂದೇಶ ನೀಡಿದರು. ಉಪಾಧ್ಯಕ್ಷೆ ಜಯಲಕ್ಷ್ಮೀ ಬಲ್ಲಾಳ್, ಸದಸ್ಯರುಗಳಾದ ರತನ್ ರೈ ಕುಂಬ್ರ, ವಿಠಲ ರೈ ಮಿತ್ತೋಡಿ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಉದ್ಯಮಿ ಸೂರ್ಯಪ್ರಸನ್ನ ರೈ, ಆನಂದ ರೈ ಮಠ, ರವಿ ಕುಮಾರ್, ವಿಶ್ವನಾಥ ರೈ ಟೈಲರ್, ಅಶ್ವಥ್ ತಿಂಗಳಾಡಿ, ಅಣ್ಣು ತಿಂಗಳಾಡಿ, ಸಂಜೀವಿನಿ ತಂಡದ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು, ಗ್ರಾಪಂ ಸಿಬ್ಬಂದಿಗಳಾದ ಜಯಂತ ಮೇರ್ಲ,ಗಣೇಶ್, ಮೃದುಳಾ, ಶಶಿಪ್ರಭಾ ರೈ, ಗ್ರಾಮೀಣ ಪುನರ್‌ವಸತಿ ಕಾರ್ಯಕರ್ತೆ ಪವಿತ್ರ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here