ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು:ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಾದ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ, ಮಾಯಿದೆ ದೇವುಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಜೊತೆಗೂಡಿ 78ನೇ ವರ್ಷದ ಸ್ವಾತಂತ್ರ್ಯದ ಸಂಭ್ರಮವನ್ನು ಆಚರಿಸಲಾಯಿತು.


ಧ್ವಜಾರೋಹಣ ನೆರವೇಸಿದ ಮಾಯಿದೇ ದೇವುಸ್ ಚರ್ಚ್‌ನ ಧರ್ಮಗುರು ಫಾ| ಲಾರೆನ್ಸ್ ಮಸ್ಕರೇನ್ಹಸ್‌ರವರು ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಮಾತನಾಡಿದರು. ಮಾಯಿದೆ ದೇವುಸ್ ಚರ್ಚಿನ ಸಹಾಯಕ ಧರ್ಮಗುರು ಫಾ| ಲೋಹಿತ್ ಅಜಯ್ ಮಸ್ಕರೇನ್ಹಸ್, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟ, ಮೂರು ಶಾಲೆಯ ಮುಖ್ಯಸ್ಥರು, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರು ಹಾಗೂ ಸದಸ್ಯರು, ಮೂರು ಶಾಲೆಯ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಮಾಯಿದೆ ದೇವುಸ್ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರು ಕಾರ್ಯಕ್ರಮವನ್ನು ಆಯೋಜಿಸಿದರು. ಶಾಲಾ ವಾಂದ್ಯ ವೃಂದದೊಂದಿಗೆ ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು. ಸಭೆಯಲ್ಲಿ ಗೈಡ್ಸ್ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here