ಕೊಯಿಲ ಬಡಗನ್ನೂರು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

0

ಬಡಗನ್ನೂರು: ಕೊಯಿಲ ಬಡಗನ್ನೂರು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅ.15ರಂದು ಆಚರಣೆ ಮಾಡಲಾಯಿತು.

ಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ನಾಯ್ಕ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಪಥ ಸಂಚಲನದಲ್ಲಿ ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಕೊಯಿಲದ ರಾಜಬೀದಿಯಲ್ಲಿ ವಿದ್ಯಾರ್ಥಿಗಳು ಪೋಷಕರು, ವಿದ್ಯಾಭಿಮಾನಿಗಳು ಬ್ಯಾಂಡ್ ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ಈ ಸಂದರ್ಭದಲ್ಲಿ ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ ಉಪಾಧ್ಯಕ್ಷೆ ಸುಶೀಲಾ ಪಕ್ಯೋಡ್, ಸದಸ್ಯ ಕುಮಾರ ಅಂಬಟೆಮೂಲೆ, ತಾ.ಪಂ.ಮಾಜಿ ಅಧ್ಯಕ್ಷೆ ರೇಖಾ ನಾಗರಾಜ್, ನಿವೃತ್ತ ಮುಖ್ಯ ಶಿಕ್ಷಕ ಉದಯ ಕುಮಾರ್ ರಾವ್ ಶರವು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್ ರೈ ಕೊಯಿಲ, ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಯಶೋಧ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ನಯನ ರೈ ಬಡಕಾಯೂರು ಮುಖ್ಯ ಶಿಕ್ಷಕಿ ಪುಷ್ಪಾವತಿ ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಪೇರಾಲು  ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮಕ್ಕಳ ಪೋಷಕರು,  ಶಿಕ್ಷಕ ವೃಂದದವರು ಅಕ್ಷರದಾಸೋಹ ಸಿಬ್ಬಂದಿಗಳು, ಶಿಕ್ಷಣಾಭಿಮಾನಿಗಳು ಅಂಗನವಾಡಿ ಮಕ್ಕಳು ಶಾಲಾ ವಿದ್ಯಾರ್ಥಿಗಳು  ಹಾಗೂ ಊರಿನವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here