ಕೊಂಡಾಡಿಕೊಪ್ಪ ಶಾಲೆಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ

0

ಕಾಣಿಯೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮೋಹನ ಕಮಿತ್ತಿಲು ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿ ಪೂರ್ವಾಧ್ಯಕ್ಷರಾದ ಶೀನಪ್ಪ ಕುಂಬಾರ ಮತ್ತು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಲತಾ ಉಪಸ್ಥಿತರಿದ್ದರು.ಶಾಲಾ ಮಕ್ಕಳಿಂದ ಸ್ವಾತಂತ್ರ್ಯೋತ್ಸವದ ಮೆರವಣಿಗೆ ನಡೆಯಿತು.ಶಾಲಾ ಮುಖ್ಯಗುರು ಜಯಂತ್ ವೈ ಸ್ವಾಗತಿಸಿ, ಸಹಶಿಕ್ಷಕಿ ದಿವ್ಯಾ ವಿ ವಂದಿಸಿದರು. ಸಹಶಿಕ್ಷಕಿ ಸೌಮ್ಯ ನಿರೂಪಿಸಿದರು.

LEAVE A REPLY

Please enter your comment!
Please enter your name here