ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಯವರು ಧ್ವಜಾರೋಹಣ ನೆರವೇರಿಸಿದರು.
ನಮ್ಮ ಪೂರ್ವಜರ ತ್ಯಾಗ ಬಲಿದಾನದಿಂದಾಗಿ ನಾವಿಂದು ನಿರ್ಭಯವಾಗಿ, ಸ್ವಾತಂತ್ರ್ಯವಾಗಿ ಜೀವನ ನಡೆಸುತ್ತಿದ್ದೇವೆ. ಎಲ್ಲಾ ಧರ್ಮದವರೂ ಸಹಬಾಳ್ವೆಯಿಂದ ಆಚರಿಸುವ ಹಬ್ಬವು ಇದಾಗಿದ್ದು, ನಮ್ಮ ಹಿರಿಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿ ಸ್ವಾತಂತ್ರ್ಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ದ್ವಜಾರೋಹಣ ನಡೆಸಿ ಗೌರವ ವಂದನೆ ಸಲ್ಲಿಸಿದ ನಂತರ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು. ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ಎ ಯವರ ಸ್ವಾಗತದೊಂದಿಗೆ ಆರಂಭವಾದ ಕಾರ್ಯಕ್ರಮವು ಶಿಕ್ಷಕಿ ಸೌಮ್ಯ ಕೆ.ಎಂ. ರವರ ಧನ್ಯವಾದದೊಂದಿಗೆ ಸಮಾಪ್ತಿಗೊಂಡಿತು. ಶಿಕ್ಷಕಿ ಗಾಯತ್ರಿ ಎಸ್ ರವರು ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸ್ವಾತಂತ್ರ್ಯೋತ್ಸವದ ಕುರಿತಾದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.