ಆ.17 : ಬೊಳ್ಳಿಪರ್ಬೊಡು ತುಳುಸಿರಿ
ಆ.18: ಬೆಳ್ಳಿಹಬ್ಬ ಮಹೋತ್ಸವದ ಸಮಾರೋಪ ಸಮಾರಂಭ
ವಿಟ್ಲ: ಶ್ರೀಧಾಮ ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮಾಣಿಲ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವದ ಸಮಾರೋಪ ಸಮಾರಂಭವು ಆ.16ರಿಂದ ಆ.18ರ ವರೆಗೆ ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಳ್ಳಲಿರುವುದು.
ಆ.16ರಂದು ಪ್ರಾತಃಕಾಲ 6.00 ರಿಂದ ಗಣಪತಿಯಾಗ, ಪಂಚಾಮೃತಾಭಿಷೇಕ, ಕಲ್ಪೋಕ್ತ ಲಕ್ಷ್ಮೀಪೂಜೆ, ವಾಯನದಾನ, ಶ್ರೀ ಗುರು ಪೂಜೆ, ಶೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ ಕನಕಧಾರ ಯಾಗ, ಚಂಡಿಕಯಾಗ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಬೆಳಗ್ಗೆ ಗಂಟೆ 10ರಿಂದ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿರವರು ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಲಿದ್ದಾರೆ.
ದ.ಕ.ಅವಿಭಜಿತ ಜಿಲ್ಲಾ ಬಂಟರ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ,ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಆರ್ಯಭಟ ಪ್ರಶಸ್ತಿ ಪುರಸ್ಕೃತರಾದ ಕೆ.ಕೆ.ಶೆಟ್ಟಿ ಹಾಗೂ ರವೀಂದ್ರ ಶೆಟ್ಟಿ ಉಳಿದೊಟ್ಟು ರವರನ್ನುಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ.
ಆ.17ರಂದು ಬೊಳ್ಳಿಪರ್ಬೊಡು ತುಳುಸಿರಿ ಕಾರ್ಯಕ್ರಮ ನಡೆಯಲಿದೆ.ಶ್ರೀಧಾಮಾದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿರವರು ದಿವ್ಯ ಸಾನಿಧ್ಯ ಕರುಣಿಸಿ ಆಶೀರ್ವಚನ ನೀಡಲಿದ್ದಾರೆ.
ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ, ಬಿ.ಸಿರೋಡ್ ಇದರ ಅಧ್ಯಕ್ಷರಾದ ಡಾ. ತುಕಾರಾಂ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗ್ಗೆ ಕಾರ್ಯಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು, ಶಾಸಕರಾದ ಉಮಾನಾಥ ಕೋಟ್ಯಾನ್, ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರನಾಥ ಗಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಮೊಹನದಾಸ ಕೊಟ್ಟಾರಿ ಉಪಸ್ಥಿತರಿರಲಿದ್ದಾರೆ. ಬಳಿಕ ತುಳು ಕೆಲಿಂಜ ಬಾರತೊ ವಿಚಾರಗೋಷ್ಠಿ ನಡೆಯಲಿದೆ. ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತುಳು ತಾಳಮದ್ದಳೆ ‘ ತುಳುನಾಡ ಬಲೀಂದ್ರೆ’ ನಡೆಯಲಿದೆ. ಬಳಿಕ ಕಬಿತೆ ಒಳತಿರ್ಲ್ ವಿಚಾರಗೋಷ್ಠಿ ನಡೆಯಲಿದೆ. ಸಾಯಂಕಾಲ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರುಗಳಾದ ಎ.ಸಿ. ಭಂಡಾರಿ, ದಯಾನಂದ ಜಿ.ಕತ್ತಲ್ಸಾರ್, ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ನಿ.,ದ ಅಧ್ಯಕ್ಷರಾದ ಸುರೇಶ್ ಕುಲಾಲ್ ಭಾಗವಹಿಸಲಿದ್ದಾರೆ. ಬಳಿಕ ಮೋಕೆದ ಕಲಾವಿದೆರ್ (ರಿ) ಬಂಟ್ವಾಳ ಇವರಿಂದ “ಮೋಕೆಡ್ ಒಂತೆ ಜೋಕೆ” ತುಳು ನಾಟಕ ಮಡೆಯಲಿದೆ.
ಆ.18ರಂದು ಬೆಳ್ಳಿ ಹಬ್ಬ ಮಹೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. ಬೆಳಗ್ಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿರವರು ಹಾಗೂ ಮೂಡಬಿದ್ರೆ ಕರಿಂಜೆ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಮೂಡಬಿದ್ರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಮ ಅಧ್ಯಕ್ಷರಾದ ಡಾ| ಎಂ .ಮೋಹನ್ ಆಳ್ವರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹೇರಂಬ ಇಂಡಸ್ಟ್ರೀಸ್ ಲಿ, ಮುಂಬಯಿ ಇದರ ಆಡಳಿತ ನಿರ್ದೇಶಕರಾದ ಸದಾಶಿವ ಶೆಟ್ಟಿ ಕೂಳೂರು ಕನ್ಯಾನರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಂಜಾರ ಗ್ರೂಪ್ ಆಫ್ ಹೋಟೆಲ್ಸ್, ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಡಾ. ಪ್ರಕಾಶ್ ಶೆಟ್ಟಿ, ದ.ಕ. ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಚಿಕ್ಕಮಗಳೂರು ಜಿಲ್ಲಾ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.