ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ ದಿನಾಚರಣೆ

0

ಸ್ವಾತಂತ್ರ್ಯ ಯೋಧರ ಬಲಿದಾನದ ಸ್ಮರಣೆ  ಸ್ವಾತಂತ್ರ ದಿನಾಚರಣೆಗೆ ಸಾರ್ಥಕ್ಯ – ನಿವೃತ್ತ ಸೈನಿಕ ಉದಯಶಂಕರ್ ಮಾಣಿ

ಪುತ್ತೂರು:ದೇಶದ ಸ್ವಾತಂತ್ರ್ಯ ಹಾಗೂ ಸುರಕ್ಷತೆಗೆ ಹೋರಾಡಿದ, ಹೋರಾಡುತ್ತಿರುವ ವೀರ ಯೋಧರ ತ್ಯಾಗ ಬಲಿದಾನಗಳನ್ನು ಸದಾ ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಭಾರತೀಯ ಸೈನ್ಯದ ನಿವೃತ್ತ ಸೇನಾನಿ  ಉದಯಶಂಕರ್ ಮಾಣಿ ಹೇಳಿದರು. 

ಅವರು ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಕ್ರೀಡಾಂಗಣದಲ್ಲಿ ಜರಗಿದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 

ನಾವು ಹಕ್ಕುಗಳ ಕುರಿತು ಮಾತನಾಡುವಾಗ ಕರ್ತವ್ಯಗಳನ್ನು ಕೂಡ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಸ್ವಾತಂತ್ರ್ಯ ಯೋಧರ ಬಲಿದಾನದ ಸ್ಮರಣೆ  ಸ್ವಾತಂತ್ರ ದಿನಾಚರಣೆಗೆ ಸಾರ್ಥಕ್ಯ ನೀಡುತ್ತದೆ ಎಂದು ಅವರು ಹೇಳಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾರ್ಥಿ ನಾಯಕ ಆಕಾಶ್ ಪ್ರಭು ಸ್ವಾಗತಿಸಿ, ನರೇಂದ್ರ ಪದವಿಪೂರ್ವ ಕಾಲೇಜಿನ ಆಶಿಕಾ ರಾವ್ ವಂದಿಸಿದರು. ವಿವೇಕಾನಂದ ಬಿ ಎಡ್ ಕಾಲೇಜಿನ ಅನನ್ಯ ಕಾರ್ಯಕ್ರಮ ನಿರೂಪಿಸಿದರು. 

ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಬಿಎಡ್ ಕಾಲೇಜ್, ನರೇಂದ್ರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ನಾಲ್ಕೂ ಸಂಸ್ಥೆಗಳ ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮಕ್ಕೆ ಪ್ರತ್ಯಕ್ಷ ಸಾಕ್ಷಿಗಳಾಗಿದ್ದರು. ಬಳಿಕ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ  ಸ್ವಾತಂತ್ರ್ಯೋತ್ಸವದ ವಿಶೇಷ ಉಪನ್ಯಾಸ ನೀಡಿದರು ಆ ಬಳಿಕ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಜನರನ್ನು ಜಾಗೃತಿಗೊಳಿಸುವ ಉದ್ದೇಶವಿಟ್ಟುಕೊಂಡು ತೆಂಕಿಲ ಪರಿಸರದ ನಾಲ್ಕೂ ವಿದ್ಯಾಸಂಸ್ಥೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಮಾನವ ಸರಪಳಿ ರಚಿಸಲಾಯಿತು.

LEAVE A REPLY

Please enter your comment!
Please enter your name here