ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಸ್ವಾತಂತ್ರೋತ್ಸವ ಮತ್ತು ವಿದ್ಯಾರ್ಥಿ ಪರಿಷತ್ ಪ್ರಮಾಣ ವಚನ

0

ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ಸ್ವಾತಂತ್ರೋತ್ಸವ ಮತ್ತು ವಿದ್ಯಾರ್ಥಿ ಪರಿಷತ್ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು.

ಮಾಜಿ ಸೈನಿಕರೂ, ತುಳುನಾಡು ಮಾಜಿ ಸೈನಿಕರ ಸಂಘದ ಬಂಟ್ವಾಳ ತಾಲ್ಲೂಕು ಇದರ ಅಧ್ಯಕ್ಷರಾದ ಎ.ವಿ ಗೌಡ ರವರು ಧ್ವಜಾರೋಹಣಗೈದರು.ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳು
ದೇಶಭಕ್ತಿ ಗೀತೆ ಮತ್ತು ನೃತ್ಯ, ಭಾಷಣ ಹೀಗೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ನೆರೆದವರ ಗಮನ ಸೆಳೆದರು.

ವಿದ್ಯಾರ್ಥಿ ಪರಿಷತ್ ಪ್ರಮಾಣ ವಚನ ಕಾರ್ಯಕ್ರಮ:
ಶಾಲಾ ವಿದ್ಯಾರ್ಥಿ ಪರಿಷತ್ ಸಮಿತಿಗೆ ಆಯ್ಕೆಯಾಗಿರುವ ಮಕ್ಕಳಿಗೆ ಪ್ರಮಾಣ ವಚನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು.ಪರಿಷತ್ ಚುನಾವಣೆಯಲ್ಲಿ ಆಯ್ಕೆಗೊಂಡಿರುವ ಮಕ್ಕಳಿಗೆ ಶಾಲೆಯ ಪ್ರಾಂಶುಪಾಲರಾದ ಲಿಬಿನ್ ಕ್ಸೇವಿಯರ್ ರವರು ಪ್ರಮಾಣ ವಚನವನ್ನು ಬೋಧಿಸಿ ಬ್ಯಾಡ್ಜ್ ಧರಿಸಿಕೊಟ್ಟರು. ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಒಲಂಪಿಯಾಡ್ ಪರೀಕ್ಷೆಯಲ್ಲಿ ರಾಂಕ್ ನೊಂದಿಗೆ ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಶಾಲೆಯ ನಿರ್ದೇಶಕರಾಗಿರುವ ನೌಶೀನ್ ಬದ್ರಿಯಾ, ಆಡಳಿತ ಅಧಿಕಾರಿ ಸಫ್ವಾನ್ ಪಿಲಿಕಲ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿ , ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here