ಪುಣ್ಚಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಸವಣೂರು : ಪುಣ್ಚಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.  ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ರಾಧಾಕೃಷ್ಣ ದೇವಸ್ಯ ಧ್ವಜಾರೋಹಣ ನೆರವೇರಿಸಿದರು.

ಸವಣೂರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ಜಯಶ್ರೀ ವಿಜಯ, ಶಾಲಾ ದಾನಿಗಳಾದ ಪಿ.ಡಿ. ಗಂಗಾಧರ್ ರೈ ದೇವಸ್ಯ , ಶಾಲಾ ಮುಖ್ಯ ಶಿಕ್ಷಕಿ ರಶ್ಮಿತಾ ನರಿಮೊಗರು, ಶಿಕ್ಷಕರಾದ ಶೋಭಾ ಕೆ, ಚಂದ್ರಿಕಾ ಎಸ್, ತೃಪ್ತಿ, ಸವಿತಾ, ಎಸ್.ಡಿ.ಎಮ್.ಸಿ. ಸದಸ್ಯರು, ‌ಪೋಷಕರು, ಹಿರಿಯ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ವಿದ್ಯಾರ್ಥಿಗಳು  ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here