ಪಾಪೆಮಜಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಕಾರ್ಯಧ್ಯಕ್ಷರಾದ ಇಕ್ಬಾಲ್ ಹುಸೇನ್ ನೆರವೇರಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜೀವ ರೈ ಕುತ್ಯಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು.

ವೇದಿಕೆಯಲ್ಲಿ ಮುಖ್ಯ ಶಿವರಾಮ ಮಣಿಯಾಣಿ ಕುರಿಂಜ, ನಿವೃತ್ತ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಗೌಡ, ಎಸ್ ಡಿ ಎಂ ಸಿ ಸದಸ್ಯರಾದ ಹೊನ್ನಪ್ಪ ನಾಯ್ಕ ಬಪ್ಪಪುಂಡೇಲು, ಚನಿಯಪ್ಪ ದರ್ಬೆತಡ್ಕ, ಲೀಲಾವತಿ, ರೇವತಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರು ಮೋನಪ್ಪ ಬಿ ಸ್ವಾಗತಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು.
ಸ್ವಾತಂತ್ರೋತ್ಸವದ ಅಂಗವಾಗಿ ನಡೆದ ಗುಡ್ಡಗಾಡು ಓಟದ ಸ್ಪರ್ಧೆ, ದೇಶಭಕ್ತಿ ಗೀತೆ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ನೀಡಿದರು. ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ದೇಶ ಭಕ್ತಿಯನ್ನು ಬಿಂಬಿಸುವ ನೃತ್ಯ ಕಾರ್ಯಕ್ರಮಗಳು ನಡೆಯಿತು.

LEAVE A REPLY

Please enter your comment!
Please enter your name here