ಹೊಸಗದ್ದೆ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.


ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ವಸಂತಲಕ್ಷ್ಮೀ ಧ್ವಜಾರೋಹಣ ನೆರವೇರಿಸಿದರು. ಅತಿಥಿಯಾಗಿದ್ದ ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಗೌಡ ಪಿ.ಎನ್., ನಿವೃತ್ತ ಮುಖ್ಯಶಿಕ್ಷಕಿ ಫೆಲ್ಸಿ ಡಯಾಸ್, ಸಹಶಿಕ್ಷಕಿ ಪುನಂತೇಶ್ವರಿ ಅವರು ಸ್ವಾತಂತ್ರ್ಯ ದಿನದ ಮಹತ್ವದ ಕುರಿತು ಮಾತನಾಡಿದರು.


ಅತಿಥಿ ಶಿಕ್ಷಕಿ ಪವಿತ್ರ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಶಾಲಾ ಮುಖ್ಯಗುರು ವಿದ್ಯಾ ಕೆ.,ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿ ಶಿಕ್ಷಕಿ ಚಿತ್ರಾವತಿ ವಂದಿಸಿದರು. ಸಹಶಿಕ್ಷಕಿ ಮಾಲತಿ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು, ಮಕ್ಕಳ ಪೋಷಕರು, ಹಳೆವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಅಂಗನವಾಡಿ ಪುಟಾಣಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಿಹಿ ತಿಂಡಿ ವಿತರಿಸಿ ಸಿಹಿಯೂಟ ನೀಡಲಾಯಿತು.

LEAVE A REPLY

Please enter your comment!
Please enter your name here