ಆನಡ್ಕ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪೂರ್ವಾಹ್ನ ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ನಾರಾಯಣ ಸುವರ್ಣ ನೆರವೇರಿಸಿದರು.
ವಿದ್ಯಾರ್ಥಿಗಳಿಂದ ದೇಶಭಕ್ತರ ವೇಷ ತೊಟ್ಟು ವಾದ್ಯ ಘೋಷಗಳೊಂದಿಗೆ ಮೆರವಣಿಗೆ ಸಾಗಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ನರಿಮೊಗರು ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಮಜಲು, ಉದ್ಯಮಿಗಳಾದ ಶ್ರೀನಿವಾಸ್ ಭಟ್ , ಉಪಾಧ್ಯಕ್ಷೆ ರೂಪ ಲತಾ,ಶಾಲಾ ಮುಖ್ಯ ಗುರು ಫೆಲ್ಸಿಟಾ ಎಸ್ .ಡಿ ಎಂ ಸಿ ಸದಸ್ಯರು ಶ್ರೀ ವಿಷ್ಣು ಯುವಕ ಮಂಡಲದ ಅಧ್ಯಕ್ಷ ಮೋಹನ್, ಸದಸ್ಯರು,ಪೋಷಕರು, ವಿದ್ಯಾಭಿಮಾನಿಗಳು ,ಹಿರಿಯ ವಿದ್ಯಾರ್ಥಿಗಳು, ಶಾಲಾ ಹಿತೈಷಿಗಳು, ಶಿಕ್ಷಕ ವೃಂದ ಭಾಗವಹಿಸಿದ್ದರು. ಜಿಪಿಟಿ ಶಿಕ್ಷಕ ಸುನಿಲ್ ಅವರು ಮಕ್ಕಳಿಗೆ ಸ್ವಾತಂತ್ರ್ಯದ ಯಶೋಗಾಥೆಯನ್ನು ತಿಳಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಗುರು ಫೆಲ್ಸಿಟಾ ಸ್ವಾಗತಿಸಿ, ವಿಶಾಲಾಕ್ಷಿ ವಂದಿಸಿದರು. ಮಾಲತಿ ಹಾಗೂ ನೀತಾ ಕಾರ್ಯಕ್ರಮ ನಿರೂಪಿಸಿದರು .ಬಳಿಕ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.