ರಾಮಕುಂಜ ಪ.ಪೂ.ಕಾಲೇಜು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮ್ಯಾರಥಾನ್ ಓಟ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮ್ಯಾರಥಾನ್ ಓಟ ನಡೆಯಿತು.


ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ. ಓಟಕ್ಕೆ ಚಾಲನೆ ನೀಡಿದರು. ಈ ಓಟದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಸುಮಾರು ೩ ಕಿಲೋ ಮೀಟರ್ ಓಟದಲ್ಲಿ ಸಾಗುತ್ತಾ, ದೇಶ ಭಕ್ತಿಯ ಘೋಷವಾಕ್ಯಗಳನ್ನ ಘೋಷಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಗಣೇಶ್ ಕೆ., ಬೋಧಕ ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here