ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು
.
ನಿವೃತ್ತ ಭಾರತೀಯ ಸೇನಾ ಸೈನಿಕರಾದ ರಾಧಾಕೃಷ್ಣ ಎ ಇವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ. ಸೇಸಪ್ಪ ರೈಯವರು ಸ್ವಾತಂತ್ರ್ಯದ ಮಹತ್ವವನ್ನು ತಿಳಿಸುವ ಮೂಲಕ ಮಕ್ಕಳಿಗೆ ಶುಭ ಹಾರೈಸಿದರು. ಬಳಿಕ ಶಾಲಾ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಶಿವಪ್ರಸಾದ್ ಆಚಾರ್ಯ ವಹಿಸಿದ್ದರು. ನಿವೃತ್ತ ಭಾರತೀಯ ಸೇನಾ ಸೈನಿಕರಾದ ರಾಧಾಕೃಷ್ಣ ಎ ಇವರು ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಸದಸ್ಯರಾದ ಎಮ್.ಸತೀಶ್ ಭಟ್, ಬಾಲಚಂದ್ರ ಮುಂಚಿತ್ತಾಯ ಹಾಗೂ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಚೈತ್ರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಂತರ ಸಭೆಯನ್ನು ಉದ್ದೇಶಿಸಿ ರಾಧಾಕೃಷ್ಣ ಎ ಇವರು ಮಾತನಾಡುತ್ತ ಮಕ್ಕಳು ದೊಡ್ಡ ಕನಸುಗಳನ್ನು ಕಾಣುತ್ತಾ ಆ ಗುರಿಯತ್ತ ಹೆಜ್ಜೆ ಹಾಕಿ ಎಂದು ಹೇಳಿದರು.
ನಿವೃತ್ತ ಭಾರತೀಯ ಸೇನಾ ಸೈನಿಕ ರಾಧಾಕೃಷ್ಣ ಎ ಇವರಿಗೆ ಶಾಲಾ ಪರವಾಗಿ ಗೌರವಾರ್ಪಣೆ ನಡೆಯಿತು. ಇವರ ಪರಿಚಯವನ್ನು ವರ್ಷಿತಾ ಇವರು ವಾಚಿಸಿದರು. ಬಳಿಕ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಕಾರ್ಯಕ್ರಮವು ನಡೆಯಿತು. ಶಾಲಾ ಪ್ರಾಂಶುಪಾಲರಾದ ಪ್ರವೀದ್ ಪಿ ಸ್ವಾಗತಿಸಿದರು. ಸಹಶಿಕ್ಷಕಿ ರಜನಿ ವಂದಿಸಿದರು, ಶಿಕ್ಷಕಿಯರಾದ ಅನುಶ್ರೀ ಮತ್ತು ಹಿತಶ್ರೀ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಶರ್ವಾಣಿ ಪ್ರಾರ್ಥಿಸಿದರು. ಶಾಲೆಯ ಎಲ್ಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಮತ್ತು ಪೋಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.