ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪ್ರತಿ ವರ್ಷ ಮಾಜಿ ಸೈನಿಕರೊಬ್ಬರಿಂದಲೇ ಧ್ವಜಾರೋಹಣ – ಗೌರವ

0

ಪುತ್ತೂರು: ಬನ್ನೂರಿನ ಕೃಷ್ಣ ನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಮಾಜಿ ಸೈನಿಕ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭ ಅವರನ್ನು ಗೌರವಿಸಲಾಯಿತು.


ಮಾಜಿ ಸೈನಿಕ ಬನ್ನೂರಿನ ಸುಂದರ ಬಿ ರವರು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ನಡೆದ ಸರಳ ಸಮಾರಂಭದಲ್ಲಿ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ತಾಪಂ ಮಾಜಿ ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ ಅಂತಾಡಿ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿ ಹಾಗೂ ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು.‌ವೇದಿಕೆಯಲ್ಲಿ ಶಾಲಾ ಉಪಾಧ್ಯಕ್ಷ ಉಮೇಶ್ ಗೌಡ ಮಳುವೇಲು, ಸಂಚಾಲಕ ಎ ವಿ ನಾರಾಯಣ , ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸೌಮ್ಯಶ್ರೀ ಹೆಗಡೆ, ಶಿಕ್ಷಕಿ ಪ್ರಕ್ಷುತ, ವಿದ್ಯಾರ್ಥಿ ನಾಯಕ ಅದ್ವಿಕ್ ಬಂಜನ್ ಅವರು ಸ್ವಾತಂತ್ರ್ಯದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ನಿರ್ದೇಶಕ ಮನೋಹರ ರೈ ಉಪಸ್ಥಿತರಿದ್ದರು.


ಶಾಲೆಯ ನಿರ್ದೇಶಕರಾದ ಪ್ರತಿಭಾ ದೇವಿ, ಡಾ. ಅನುಪಮಾ, ಗಂಗಾಧರ ಗೌಡ, ವಾಮನ ಗೌಡ, ಬೋಧಕ ಹಾಗೂ ಬೋಧಕೇತರ ವೃಂದ, ಪೋಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಧ್ವಜಾರೋಹಣ ಸಂದರ್ಭ ಮಕ್ಕಳು ರಾಷ್ಟ್ರಧ್ವಜ ಗೀತೆ, ರಾಷ್ಟ್ರ ಗೀತೆ ಹಾಗೂ ನಮ್ಮ ಮಾತೃಭೂಮಿಗೆ ಗೌರವ ಸೂಚಿಸುವಂತೆ ತಿಳಿಸಿದರು. ಶಾಲಾ ಪ್ರಾಂಶುಪಾಲೆ ಸವಿತಾ ಕುಮಾರಿಯವರು ಸ್ವಾಗತಿಸಿ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು. ಶಿಕ್ಷಕಿ ರಾಧಾ ಸಂವಿಧಾನದ ಪೂರ್ವ ಪೀಠಿಕೆಯನ್ನು ವಾಚಿಸಿದರು ಹಾಗೂ ಹರ್ಷಿತ ವಂದಿಸಿದರು. ಯಶುಭಾ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here