ಚದುರಂಗ ಸ್ಪರ್ಧೆ: ಸುದಾನದ ಅನಿಖಾ ಯು ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ 17 ರ ಪ್ರೌಢಶಾಲಾ ವಿಭಾಗದ ಬಾಲಕಿಯರ ಚದುರಂಗ ಸ್ಪರ್ಧೆಯಲ್ಲಿ ಸುದಾನ ವಸತಿಯುತ ಶಾಲೆಯ ಅನಿಖಾ ಯು (10ನೇ) ಇವರು ಸ್ಪರ್ಧಿಸಿ ವಿಜೇತರಾಗಿ ಹಾವೇರಿಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರನ್ನು ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶೋಭಾನಾಗರಾಜ್ ಮತ್ತು ದೈಹಿಕ ಶಿಕ್ಷಕರು ಅಭಿನಂದಿಸಿ, ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here