ಪಾಲೆತ್ತಡ್ಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಡಬ: ಪಾಲೆತ್ತಡ್ಕ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಜಯರಾಮ ಗೌಡ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮರ್ದಾಳ ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷರು, ಮಾಜಿ ಅಧ್ಯಕ್ಷರು, ಎಸ್‌ಡಿಎಂಸಿ ಅಧ್ಯಕ್ಷರು, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಎಸ್‌ಡಿಎಂಸಿ ಸದಸ್ಯರು, ಊರಿನ ವಿದ್ಯಾಭಿಮಾನಿಗಳು ಭಾಗವಹಿಸಿದ್ದರು.

ಮುಖ್ಯಗುರು ಶ್ಯಾಮಲ ಕೆ.,ಸ್ವಾಗತಿಸಿದರು. ಶಿಕ್ಷಕ ಪ್ರವೀಣ ಎಸ್.ಕೆ.ನಿರೂಪಿಸಿದರು. ಶಿಕ್ಷಕಿ ಸಂಧ್ಯಾ ಹಾಗೂ ವಿದ್ಯಾರ್ಥಿನಿ ಬೃಂದಾ ಸಹಕರಿಸಿದರು. ಶಿಕ್ಷಕಿ ರೇಖಾ ಎಂ.ವಂದಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here