ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಡಬ: ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರೋತ್ಸವದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಖರ ಗೌಡ ಪಾಪುದಮಂಡೆ ಧ್ವಜರೋಹಣಗೈದು ಶುಭಹಾರೈಸಿದರು.


ಕೊಯಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯತೀಶ್ ಸೀಗೆತ್ತಡಿ, ಸದಸ್ಯ ಚಿದಾನಂದ ಪಾನ್ಯಾಲು, ಶಾಲಾ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಗೌಡ ಎರ್ಮಡ್ಕ ಮೊದಲಾದವರು ಇದ್ದರು. ಮುಖ್ಯ ಶಿಕ್ಷಕಿ ವಾರಿಜಾ ಸ್ವಾಗತಿಸಿದರು. ಶಿಕ್ಷಕ ರವಿಚಂದ್ರ ವಂದಿಸಿದರು. ಶಿಕ್ಷಕ ಶೇಖರ ಬಲ್ಯ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಗೋಳಿತ್ತಡಿ-ಏಣಿತಡ್ಕ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ನಶಮುಕ್ತ ಭಾರತ ಪ್ರಮಾಣವಚನ, ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ, ಸಭಾ ಕಾರ್ಯಕ್ರಮ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here