ಚಾರ್ವಾಕ ಸುರೇಶ್ ಕುಮಾರ್ ಪಾಲ್ತಿಲ ಅವರ ಸಾಹಿತ್ಯ ಕ್ಷೇತ್ರ ಗುರುತಿಸಿ ಸನ್ಮಾನ

0

ಕಾಣಿಯೂರು: ದಕ್ಷಿಣ ಕನ್ನಡ ತಮಿಳು ಸೇವಾ ಸಂಘ ಸುಳ್ಯ ಇದರ ವತಿಯಿಂದ ಹೋಟೆಲ್ ಸದರ್ನ್ ರೆಸಿಡೆನ್ಸಿ, ಸುಳ್ಯ ಇಲ್ಲಿ ಆ.18 ಭಾನುವಾರ ಆಯೋಜಿಸಿದ್ದ 2023-2 4ನೇ ಸಾಲಿನ ಎಸ್ಸಸ್ಸೆಲ್ಸಿ ಹಾಗು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಡೆದ ಸನ್ಮಾನ ಸಮಾರಂಭದಲ್ಲಿ, ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಇವರನ್ನು ಸಂಘಟನೆ ವತಿಯಿಂದ ಸನ್ಮಾನಿಲಾಯಿತು.

ಇವರು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಚಾರ್ವಾಕ ಗ್ರಾಮದ ಪಾಲ್ತಿಲ ಕುಮಾರ್ ಮತ್ತು ಸರೋಜಿನಿ ಇವರ ಪುತ್ರ. ಇವರ ಪ್ರಸಕ್ತ ಗಾಯನ ,ಸಾಹಿತ್ಯ ಮತ್ತು ಹಲವಾರು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಗೂ ಕವಿಗೋಷ್ಠಿಯಲ್ಲಿ ಭಾಗವಹಿಸುವ ಮೂಲಕ ಹಲವರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. ಇವರ ಕಲಾಪ್ರತಿಭೆಗೆ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುತ್ತಾರೆ. ಇವರ ಕಲಾ ಸೇವೆಯನ್ನು ಪರಿಗಣಿಸಿ ಇವರಿಗೆ ದಕ್ಷಿಣ ಕನ್ನಡ ತಮಿಳು ಸೇವಾ ಸಂಘ ಸುಳ್ಯ ವತಿಯಿಂದ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಗಿದೆ.

LEAVE A REPLY

Please enter your comment!
Please enter your name here