ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ-ಎಂ.ಎಸ್ ಮುಹಮ್ಮದ್ ಖಂಡನೆ

0

ಪುತ್ತೂರು: ಕೊಂಬೆಟ್ಟು ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವ ಘಟನೆ ಖಂಡನೀಯವಾಗಿದ್ದು ಪ್ರಕರಣದ ಬಗ್ಗೆ ಸೂಕ್ತ ಕಾನೂನು ಕ್ರಮ ಆಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮುಹಮ್ಮದ್ ಆಗ್ರಹಿಸಿದ್ದಾರೆ.


ಪುತ್ತೂರಿಗೆ ಆಗಮಿಸಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ಚೂರಿ ಇರಿತ ಪ್ರಕರಣ ವಿಚಾರವಾಗಿ ನಾನು ಈಗಾಗಲೇ ದ.ಕ ಜಿಲ್ಲಾ ಎಸ್ಪಿ ಜೊತೆ ಮಾತನಾಡಿದ್ದು ಪೊಲೀಸ್ ಇಲಾಖೆ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ ಎಂದು ಹೇಳಿದರು.


ಘಟನೆ ನಮಗೆಲ್ಲಾ ಬಹಳ ನೋವು ಮತ್ತು ಆಘಾತ ತಂದಿದೆ. ಇಂತಹ ಕೃತ್ಯ ಭವಿಷ್ಯದಲ್ಲಿ ಮರುಕಳಿಸಬಾರದು, ಹಾಗಾಗಿ ಕಟ್ಟುನಿಟ್ಟಿನ ಕ್ರಮ ಆಗಬೇಕು, ಕಾಲೇಜಿನಲ್ಲಿ ಇಂತಹ ಘಟನೆ ನಡೆಯುವುದೆಂದರೆ ನಿಜವಾಗಿಯೂ ಬಹಳ ಬೇಸರದ ವಿಚಾರ. ವಿದ್ಯೆ ಕಲಿಕೆಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಇಂತಹ ಕೃತ್ಯ ನಡೆಸುವುದೆಂದರೆ ಅದನ್ನು ಈಗಲೇ ಸಂಬಂಧಪಟ್ಟವರು ಗಂಭೀರವಾಗಿ ಪರಿಗಣಿಸಬೇಕು. ಶಿಕ್ಷಣ ಸಂಸ್ಥೆಯವರೂ ಕೂಡಾ ಇಂತಹ ಘಟನೆಗಳಾದಾಗ ಬೇಜವಾಬ್ದಾರಿಯಿಂದ ವರ್ತಿಸಬಾರದು ಎಂದು ಅವರು ಹೇಳಿದರು. ಇಂತಹ ಘಟನೆಗಳಾದಾಗ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here