ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸರಿಗೆ, ಪ್ರಾಂಶುಪಾಲರಿಗೆ ವಿದ್ಯಾರ್ಥಿ ಸಂಘಟನೆ ಮನವಿ

0

ಪುತ್ತೂರು: ಪುತ್ತೂರು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಿಂದ ಚೂರಿ ಇರಿತಕ್ಕೊಳಾಗಿದ್ದೇನೆ ಎಂದು ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿ ವಿರುದ್ಧ ಕ್ರಮ ಕೈಗೊಂಡು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಲೇಜಿನಿ ವಿದ್ಯಾರ್ಥಿ ಸಂಘಟನೆ ಪ್ರಾಂಶುಪಾಲರಿಗೆ ಮತ್ತು ಪುತ್ತೂರು ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮನವಿ ನೀಡಿದೆ.


ನಮ್ಮ ಮನವಿಯನ್ನು ತಿರಸ್ಕರಿಸಿ ವಿದ್ಯಾರ್ಥಿನಿಯನ್ನು ವಜಾಗೊಳಿಸದೆ ಇದ್ದರೆ ತೀವ್ರವಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಸುಳ್ಳು ಪ್ರಕರಣ ದಾಖಲಾಗಿರುವ ಸಂತ್ರಸ್ತ ವಿದ್ಯಾರ್ಥಿಯ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗುತ್ತಿದೆ. ಅವರ ವಿರುದ್ಧವೂ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here