ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾಗಿ ಇಬ್ರಾಹೀಂ ಎಂ. ಅಧಿಕಾರ ಸ್ವೀಕಾರ

0

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಇಬ್ರಾಹೀಂ ಎಂ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಇಲ್ಲಿನ ಪ್ರಾಂಶುಪಾಲರಾಗಿದ್ದ ಸುಧೀರ್ ಕುಮಾರ್ ಎಂ. ಅವರು ಕಬಕ ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆಗೊಂಡಿದ್ದು, ತೆರವಾದ ಅವರ ಸ್ಥಾನಕ್ಕೆ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 17 ವರ್ಷಗಳಿಂದ ಉಪನ್ಯಾಸಕರಾಗಿ ಹಾಗೂ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ ಇಬ್ರಾಹೀಂ ಎಂ. ಅವರನ್ನು ನೇಮಕಗೊಳಿಸಲಾಗಿದೆ.

LEAVE A REPLY

Please enter your comment!
Please enter your name here