ಪುತ್ತೂರು: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು, ಸರಸ್ವತಿ ಸಮೂಹ ಸಂಸ್ಥೆಗಳು, ಕಡಬ ಇವರ ಸಹಯೋಗದಲಲ್ಲಿ ಆ.೨೩ರಂದು ಕಡಬದ ಸರಸ್ವತೀ ವಿದ್ಯಾ ಸಂಸ್ಥೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ – 2024ರಲ್ಲಿ, ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಸರಸ್ವತಿ ವಿದ್ಯಾ ಮಂದಿರ ಪ್ರಾಥಮಿಕ ಶಾಲೆಯ ಅಭಯ.ಟಿ. ಎಸ್ ದ್ವಿತೀಯ ಸ್ಥಾನ ಹಾಗೂ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಅಚಿಂತ್ಯ ಉಂಗ್ರುಪುಳಿತ್ತಾಯ ಕೊಡಂಕಿರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಇವರಿಗೆ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ತರಬೇತಿ ನೀಡಿದ್ದು, ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಸಹಕರಿಸಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಶಾಲಾಡಳಿತ ಮಂಡಳಿ, ಶಾಲಾ ಸಂಚಾಲಕರಾದ ಅವಿನಾಶ್ ಕೊಡಂಕಿರಿ, ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾದ ವಿಶ್ವನಾಥ ಬಲ್ಯಾಯ, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ಸುರೇಶ್ ಭಟ್ ಸೂರ್ಡೇಲು,ಮುಖ್ಯ ಗುರುಗಳು ಮತ್ತು ಸಂಸ್ಥೆಯ ಶಿಕ್ಷಕ ವೃಂದದವರು ಅಭಿನಂದಿಸಿದರು.