ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವರ್ಷಂಪ್ರತಿಯಂತೆ ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ ನೀಡುವ ವಿಶೇಷ ಕಾರ್ಯಕ್ರಮ ಆ.24ರಂದು ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲ್ನಲ್ಲಿ ನಡೆಯಿತು.
ಸಂಘವು ಸಾಮಾಜಿಕ ಕಾರ್ಯದ ಮೂಲಕ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಸಂಘದ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಆಯ್ದ ಸರಕಾರಿ ಶಾಲೆಗಳಲ್ಲಿ 8ನೇ ಮತ್ತು 9ನೇ ತರಗತಿಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ಶಾಲಾ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ 250 ವಿದ್ಯಾರ್ಥಿಗಳಿಗೆ ತಲಾ ರೂ. 2ಸಾವಿರ ನೀಡಲಾಯಿತು.
ಪ್ರತಿಭಾ ಪುರಸ್ಕಾರ:
ಎಸ್ ಎಸ್ ಎಲ್ ಸಿ ಯಲ್ಲಿ 619 ಅಂಕ ಪಡೆದ ಕಲ್ಮಂಜದ ತನುಶ್ರೀ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅವರು ಮಾತನಾಡಿ ಇದುವರೆಗೆ ಒಟ್ಟು ರೂ. 21,73,೦೦೦ ಮೊತ್ತವನ್ನು ಒಟ್ಟು 1,067 ವಿದ್ಯಾರ್ಥಿಗಳಿಗೆ ವಿತರಿಸಿರುತ್ತೇವೆ. ಮಾತ್ರವಲ್ಲದೆ ಹಲವಾರು ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವನ್ನು ಕೂಡಾ ನೀಡಿರುತ್ತೇವೆ ಎಂದ ಅವರು ಸರಕಾರಿ ಶಾಲೆಯ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುತ್ತಿರುವುದು ಸಂತೋಷ ಕೊಟ್ಟಿದೆ ಎಂದರು.
ಸಹಕಾರ ಸಂಘಗಳ ಸಹಾಯಕ ನಿಬಂಧಕ ಯಸ್ ಯಂ ರಘುಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇಲ್ಲಿನ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿಯವರು ಅಧ್ಯಕ್ಷತೆ ವಹಿಸಿದರು. ಕ್ಷೇತ್ರ ಶಿಕ್ಷ ಸಂಪನ್ಮೂಲ ಕೇಂದ್ರದ ರತ್ನಕುಮಾರಿ ಅತಿಥಿಗಳಾಗಿ ಭಾಗವಹಿಸಿದರು. ಸಂಘದ ಉಪಾಧ್ಯಕ್ಷ ಸುಂದರ ರೈ ಸವಣೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೀತಾರಾಮ ಶೆಟ್ಟಿ, ಯಮುನಾ ರೈ, ಬಿ ಮಹಾಬಲ ರೈ ಅತಿಥಿಗಳನ್ನು ಗೌರವಿಸಿದರು. ರಕ್ಷ ಪ್ರಾರ್ಥಿಸಿದರು. ಸಂಘದ ಅಧ್ಯಕ್ಷ ಸೀತಾರಾಮ ರೈ ಸ್ವಾಗತಿಸಿ, ಸಂಘದ ಮಹಾಪ್ರಬಂಧಕ ವಸಂತ ಜಾಲಾಡಿ ವಂದಿಸಿದರು. ಪ್ರಿಯ ಬಡ್ಡಡ್ಕ, ಸುನಾದ್ ರಾಜ್ ಕಾರ್ಯಕ್ರಮ ನಿರೂಪಿಸಿದರು.