





ಪುತ್ತೂರು: ನರಿಮೊಗರು ಮುಕ್ವೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಇದರ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆಯು ಆ.25ರಂದು ಮಧ್ಯಾಹ್ನ ಮುಕ್ವೆ ಶಾಲಾ ಸಭಾಂಗಣದಲ್ಲಿ ಜರಗಲಿದೆ. ಶಾಲಾ ವಿದ್ಯಾಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿ.ಎಂ., ಪ್ರಧಾನ ಕಾರ್ಯದರ್ಶಿ ಪಿ.ಎಂ ಅಶ್ರಫ್, ಕೋಶಾಧಿಕಾರಿ ನವೀನ್ ಡಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







