ಆ.26- ಕಾಣಿಯೂರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

0

ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 12ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ.26ರಂದು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಲಿದೆ.

ಬೆಳಿಗ್ಗೆ ಕಾರ್ಯಕ್ರಮವನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಹಿರಿಯ ಸದಸ್ಯ ಕುಶಾಲಪ್ಪ ಗೌಡ ಮುಗರಂಜ ಉದ್ಘಾಟಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ ವಹಿಸಲಿದ್ದು, ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅರ್ಚಕ ಈಶ್ವರಚಂದ್ರ ಭಟ್, ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷ ರವಿಕುಮಾರ್ ನೇರೋಳ್ತಡ್ಕ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪುರುಷರಿಗೆ, ಮಹಿಳೆಯರಿಗೆ ಮತ್ತು ಬಾಲಕ, ಬಾಲಕಿಯರ ವಿಭಾಗದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಯುವಕ ಮಂಡಲದ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here