ಆ.26: ನಿಡ್ಪಳ್ಳಿ ಕರ್ನಪ್ಪಾಡಿಯಲ್ಲಿ 10ನೇ ವರ್ಷದ ಮೊಸರು ಕುಡಿಕೆ ಉತ್ಸವ- ವಿವಿಧ ಆಟೋಟ ಸ್ಪರ್ಧೆಗಳು

0

ನಿಡ್ಪಳ್ಳಿ: ಜೈ ಯುವಶಕ್ತಿ ಯುವಕ ಮಂಡಲ ತಂಬುತ್ತಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 10ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಆ.26ರಂದು ಕರ್ನಪ್ಪಾಡಿ ಕೋಟಿ ಚೆನ್ನಯ ಬ್ರಹ್ಮಬೈದರ್ಕಳ ಗರಡಿ ವಠಾರದಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 9 ಕ್ಕೆ ಮ್ಯಾರಥಾನ್ ಗೆ ಚಾಲನೆ‌ ನೀಡುವ ಮೂಲಕ ಉದ್ಘಾಟನೆಗೊಳ್ಳಲಿದೆ. ನಂತರ ಹಗ್ಗ ಜಗ್ಗಾಟ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಹೈಸ್ಕೂಲ್ ವಿಭಾಗದ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಬೆಳಿಗ್ಗೆ ಗಂಟೆ  11.30ಕ್ಕೆ ಸಭಾ ಕಾರ್ಯಕ್ರಮ, ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here