ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ವಿಜ್ಞಾನ ಸಂಘದಿಂದ ಮಾಹಿತಿ ಕಾರ್ಯಾಗಾರ

0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅನುಕೂಲವಾಗುವಂತಹ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಪುತ್ತೂರು ಐ. ಆರ್‌. ಸಿ. ಎಂ. ಡಿ ಎಜುಕೇಷನಲ್‌ ಸೆಂಟರ್‌ ನ ಪ್ರಫುಲ್ಲಾ ಗಣೇಶ್‌, ವಿದ್ಯಾರ್ಥಿಗಳಿಗೆ “ಟ್ರಿಕ್ಸ್ ಇನ್‌ ಪ್ರೋಬ್ಲೆಮ್‌ ಸೋಲ್ವಿಂಗ್”‌ ವಿಷಯದ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ  ವಿಜ್ಞಾನ ವಿಭಾಗದ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಉಪನ್ಯಾಸಕಿ ಮಮತಾ ಶೆಟ್ಟಿ ಸ್ವಾಗತಿಸಿ,ನಿರೂಪಿಸಿ,ವಂದಿಸಿದರು.

LEAVE A REPLY

Please enter your comment!
Please enter your name here