ಹಿರೆಬಂಡಾಡಿ: ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಹಿರೆಬಂಡಾಡಿ: ಉಳತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ನಡೆಯುವ 29ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜನಾರ್ದನ ಗೌಡ ಶಾಂತಿತ್ತಡ್ಕ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ನಾರಾಯಣ ಕನ್ಯಾನ, ಕಾರ್ಯದರ್ಶಿ ನವೀನ ಪಡ್ಪು, ಕೋಶಾಧಿಕಾರಿ ಬೆಳಿಯಪ್ಪ ಗೌಡ ಜಾಲು, ದೇವಸ್ಥಾನದ ಅರ್ಚಕರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಗಣೇಶೋತ್ಸವ ಸಮಿತಿಯ ಸದಸ್ಯರು, ಬೈಲುವಾರು ಸಂಚಾಲಕರು, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here