ಪುತ್ತೂರು: ರಾಜ್ಯ ಸರಕಾರದ ಹಗರಣ ಮತ್ತು ಕಾಂಗ್ರೆಸ್ ನಾಯಕರು ಬೇಜವಾಬ್ದಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಘಟಕ ಪುತ್ತೂರು ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ಧ ಆ.28ರಂದು ಸಂಜೆ ಪುತ್ತೂರು ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಲಿದೆ.
ಸಂಜೆ ಗಂಟೆ 4.30ಕ್ಕೆ ನಡೆಯುವ ಪ್ರತಿಭಟನಾ ಸಭೆಗೆ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಆಗಮಿಸಲಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.