





ಪುತ್ತೂರು: ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ,ಪಂಚಲಿಂಗೇಶ್ವರ ಕ್ರೀಡಾ ಸಂಘದ ವತಿಯಿಂದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.


ಅತಿಥಿ ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಗ್ರಾಮ ಪಂಚಾಯತ್ ಗುಮಾಸ್ತ ಶೀನಪ್ಪ ಎಂ ಇವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ,ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವ ಹಾಗೂ ಶಾಲಾ ದಿನಗಳಲ್ಲಿ ತಮ್ಮ ಕ್ರೀಡಾ ಅನುಭವದ ಬಗ್ಗೆ ತಿಳಿಸಿದರು.






ವೇದಿಕೆಯಲ್ಲಿ ಶಾಲಾ ಮುಖ್ಯ ಗುರು ವನಿತಾ ಕೆ, ದೈಹಿಕ ಶಿಕ್ಷಕ ಮುರಳಿ ಮೋಹನ ಶೆಟ್ಟಿ ಹಾಗೂ ಕ್ರೀಡಾ ಸಂಘದ ಅಧ್ಯಕ್ಷರಾದ ವಿಜಿತ್ ಉಪಸ್ಥಿತರಿದ್ದರು. 10ನೇ ತರಗತಿ ವಿದ್ಯಾರ್ಥಿ ವಿನೀತ್ ಪ್ರಾರ್ಥಿಸಿದರು. ವಿದ್ಯಾರ್ಥಿಗಳಿಗೆ ನಡೆದ ಗುಡ್ಡಗಾಡು ಓಟದ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಒಂಬತ್ತನೇ ತರಗತಿ ವಿದ್ಯಾರ್ಥಿನಿ ದಿವ್ಯಶ್ರೀ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಸಹಕರಿಸಿದರು.






