ನಿವೃತ್ತ ಉಪತಹಶೀಲ್ದಾರ್ ರಾಮಣ್ಣ ನಾಯ್ಕರವರಿಗೆ ಬೀಳ್ಕೊಡುಗೆ

0

ಪುತ್ತೂರು:ಕಂದಾಯ ಇಲಾಖೆಯ ಪುತ್ತೂರು ತಾಲೂಕು ಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಾಮಣ್ಣ ನಾಯ್ಕರವರಿಗೆ ಬೀಳ್ಕೊಡುಗೆ ಹಾಗೂ ಮಂಗಳೂರು ಸಹಾಯಕ ಆಯುಕ್ತರ ಕಚೇರಿಗೆ ನಿಯೋಜನೆಗೊಂಡಿರುವ ಗ್ರಾಮ ಆಡಳಿತಾಧಿಕಾರಿ ವೀಣಾ ಎಸ್‌ರವರಿಗೆ ಸನ್ಮಾನ ಸಮಾರಂಭವು ಆ.31ರಂದು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.


ನಿವೃತ್ತರನ್ನು ಸನ್ಮಾನಿಸಿದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಮಾತನಾಡಿ, ಶ್ರಮಜೀವಿಯಾಗಿ ರಾಮಣ್ಣ ನಾಯ್ಕರವರು ಕಚೇರಿಯ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದವರು. ಉತ್ತಮ ಕೆಲಸಗಾರರಾಗಿ ಚುನಾವಣೆಯ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ನಿರ್ವಹಿಸಿದವರು ಎಂದರು.


ತಹಶೀಲ್ದಾರ್ ಪುರಂದರ ಮಾತನಾಡಿ, ಸರಕಾರಿ ವೃತ್ತಿಯಲ್ಲಿ ನೇಮಕವಾಗುವುದು ಅಕಸ್ಮಿಕವಾದರೂ ನಿವೃತ್ತಿ ನಿಶ್ಚಿತ. ತನ್ನ ವೃತ್ತಿಯ ಅವಧಿಯಲ್ಲಿ ಉತ್ತಮ ಕೆಲಸ ನಿರ್ವಹಿಸಿದವರು ಎಂದರು.


ಸನ್ಮಾನ ಸ್ವೀಕರಿಸಿದ ಉಪ ತಹಶೀಲ್ದಾರ್ ರಾಮಣ್ಣ ನಾಯ್ಕ ಮಾತನಾಡಿ, ತನ್ನ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು ತನ್ನ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.


ಸನ್ಮಾನ:
ನಿವೃತ್ತ ಉಪ ತಹಶೀಲ್ದಾರ್ ರಾಮಣ್ಣ ನಾಯ್ಕ ಹಾಗೂ ಮಂಗಳೂರು ಸಹಾಯಕ ಆಯುಕ್ತರ ಕಚೇರಿಗೆ ನಿಯೋಜನೆಗೊಂಡಿರುವ ವೀಣಾ ಎಸ್‌ರವರನ್ನು ಇಲಾಖೆಯ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.


ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ ಮೂರ್ತಿ, ಉಪ ನೋಂದಾವಣಾಧಿಕಾರಿಗಳ ಕಛೇರಿಯ ಸತ್ಯೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಕಚೇರಿಯ ದಯಾನಂದ ಸ್ವಾಗತಿಸಿ, ವಂದಿಸಿದರು. ಇಲಾಖೆಯ ಅಧಿಕಾರಿ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here