





ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.25ರ ತನಕ ಮುಂದೂಡಲಾಗಿದೆ.
ಶಿಶಿಕ್ಷು ಅಧಿನಿಯಮ 1961ರನ್ವಯ ಪೂರ್ಣ ಅವಧಿಯ ತಾಂತ್ರಿಕ/ಪಾಸಾ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆ.8ರಿಂದ ಆ.25ರ ತನಕ ಕಾಲಾವಕಾಶ ನೀಡಲಾಗಿತ್ತು. ಅಲ್ಲದೆ ಆ.30ರಂದು ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ ಅಭ್ಯೃರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.25ರ ತನಕ ಮುಂದೂಡಲಾಗಿದೆ. ಅಲ್ಲದೆ ಅದೇ ದಿನ ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಯೊಂದಿಗೆ ಪುತ್ತೂರು ವಿಭಾಗೀಯ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.











