ಬಡಗನ್ನೂರು: ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ಮತ್ತು ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ “ಕುಲ ದೈವೋ ಬ್ರಹ್ಮ” ಎಂಬ ನೂತನ ಯಕ್ಷಗಾನ ಪ್ರಸಂಗ ಸೆ.1ರಂದು ಮೂಡಬಿದ್ರೆಯ ಕನ್ನಡ ಕಲಾಭವನದಲ್ಲಿ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮವು ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭುಜಬಲಿ ಜೈನ್, ಜಾನಪದ ವಿದ್ವಾಂಸ ಶೇಖರ್ ಮೂಡಬಿದ್ರೆ, ನಗರಸಭೆ ಸದಸ್ಯ ಸುರೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್, ಗೆಜ್ಜೆಗಿರಿ ಕ್ಷೇತ್ರದ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಬೆಳ್ತಂಗಡಿ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ್, ಮೂಡಬಿದಿರೆ ಬಿಲ್ಲವ ಸಂಘ ಅಧ್ಯಕ್ಷ ಸುರೇಶ್ ಕೆ ಪೂಜಾರಿ ,ಇರುವೈಲು ಬಿಲ್ಲವ ಸಂಘದ ಅಧ್ಯಕ್ಷ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಕರ ಕುಕ್ಕೆಡಿ, ವೇಣೂರು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್, ವಕೀಲರಾದ ನಾಗೇಶ್ ಶೆಟ್ಟಿ, ಹಾಗೂ ಮತ್ತಿತರರು ಗಣ್ಯರ ಸಮಕ್ಷಮದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಯಕ್ಷಗಾನಕ್ಕೆ ಶ್ರಮಿಸಿದ ಹಿರಿಯ ಮತ್ತು ಕಿರಿಯ ಕಲಾವಿದರನ್ನು ಗೌರವಿಸಲಾಯಿತು.