ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ಸು ನಿಲ್ದಾಣದ ಬಳಿಯ ನಿವಾಸಿ, ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮೆಲ್ವಿನ್ ಮಸ್ಕರೇನ್ಹಸ್ (57ವ.) ರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಕಿನ್ನಿಗೋಳಿಯ ಸಹೋದರಿಯ ಮನೆಯಲ್ಲಿ ಸೆ.3 ರಂದು ರಾತ್ರಿ ನಿಧನ ಹೊಂದಿದ್ದಾರೆ.
ಹಲವು ವರ್ಷಗಳಿಂದ ಸೌದಿ ಅರೇಬಿಯದಲ್ಲಿ ಉದ್ಯೋಗದಲ್ಲಿದ್ದು ಅಸೌಖ್ಯದ ಬಳಿಕ ಊರಿಗೆ ವಾಪಸಾಗಿದ್ದರು. ನೆಲ್ಲಿಕಟ್ಟೆ ಮಿತ್ರವೃಂದದ ಸಕ್ರಿಯ ಸದಸ್ಯರಾಗಿದ್ದ ಇವರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.