





ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಜಮಾಬಂದಿ ಸಭೆ ಸೆ.4ರಂದು ಬೆಳಿಗ್ಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಜಮಾಬಂಧಿ ಅಧಿಕಾರಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜ್ಞಾನೇಶ್ ಎಂ.ಪಿ.,ಅವರು ಮಾತನಾಡಿ, ಗ್ರಾಮ ಪಂಚಾಯಿತಿಯ ಲೆಕ್ಕಪತ್ರಗಳ ದಾಖಲೆ ಪಾರದರ್ಶಕವಾಗಿರಬೇಕೆಂಬ ಉದ್ದೇಶದಿಂದ ಜಮಾಬಂಧಿ ಸಭೆ ನಡೆಸಲಾಗುತ್ತಿದೆ. ಜೊತೆಗೆ ಕಾಮಗಾರಿಗಳ ತಪಾಸಣೆಯೂ ನಡೆಸಲಾಗುತ್ತದೆ. ನೆಲ್ಯಾಡಿ ಗ್ರಾಮ ಪಂಚಾಯತ್‌ನ ಲೆಕ್ಕಪತ್ರಗಳ ಬಗ್ಗೆ ಯಾವುದೇ ಆಕ್ಷೇಪಣೆ ಬಂದಿರುವುದಿಲ್ಲ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷ ಯಾಕುಬ್ ಯಾನೆ ಸಲಾಂ ಬಿಲಾಲ್ ಅವರು ಮಾತನಾಡಿ, ಜಮಾಬಂಧಿ ಸಭೆಯಲ್ಲಿ ಗ್ರಾಮ ಪಂಚಾಯತ್‌ನ ಲೆಕ್ಕಪತ್ರಗಳ ದಾಖಲೆ ಮತ್ತು ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಸಲಾಗುತ್ತದೆ ಎಂದರು. ಉಪಾಧ್ಯಕ್ಷೆ ರೇಶ್ಮಾಶಶಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸಭೆಯಲ್ಲಿ ಗ್ರಾ.ಪಂ.ಸದಸ್ಯರಾದ ಮಹಮ್ಮದ್ ಇಕ್ಬಾಲ್, ಉಷಾಜೋಯಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಲೆಕ್ಕಸಹಾಯಕ ಅಂಗು ಅವರು ಸ್ವಾಗತಿಸಿ, ಲೆಕ್ಕಪತ್ರಗಳ ಮಂಡನೆ ಮಾಡಿದರು. ಪಿಡಿಒ ಮೋಹನ್‌ಕುಮಾರ್ ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದರು. ಸಭೆಯ ಬಳಿಕ ಕಾಮಗಾರಿಗಳ ತಪಾಸಣೆ ನಡೆಸಲಾಯಿತು.
















