ಸೆ.7: ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 41 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ

0

ಕಾವು:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 41 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸೆ 7 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ನಡೆಯಲಿದೆ.


ಅರ್ಚಕರಾದ ವೇದಮೂರ್ತಿ ಶ್ರೀ ಶಿವಪ್ರಸಾದ್ ಕಡಮಣ್ಣಾಯ ಇವರ ಪೌರೋಹಿತ್ಯದಲ್ಲಿ ಬೆಳಿಗ್ಗೆ 6.30 ಕ್ಕೆ ಶ್ರೀ ಗಣೇಶ ವಿಗ್ರಹ ಪ್ರತಿಷ್ಟೆ ನಡೆದು ನಂತರ ಭಗವಾಧ್ವಜಾರೋಹನ, ವಿವಿಧ ಭಜನಾ ತಂಡಗಳಿಂದ ಭಜನಾ ಸೇವಾ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಗಣಹೋಮ,ಮಹಾಪೂಜೆ ನಡಯಲಿದೆ.


ಸಭಾ ಕಾರ್ಯಕ್ರಮ
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ನನ್ಯ ಅಚ್ಚುತ ಮುಡಿತ್ತಾಯ ವಹಿಸಲಿದ್ದು,ಮುಖ್ಯ ಭಾಷಣಗಾರರಾಗಿ ವಿವೇಕಾನಂದ ಮಹಾ ವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿ ಹರಿಪ್ರಸಾದ್ ಈಶ್ವರಮಂಗಳ ಹಾಗೂ ಮುಖ್ಯ ಅತಿಥಿಗಳಾಗಿ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿ ಗೋಪಾಲ ಕೆ ಟಿ ಭಾಗವಹಿಸಲಿದ್ದಾರೆ.ಸಭಾ ಕಾರ್ಯಕ್ರಮದ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.


ಸಂಜೆ ಶ್ರೀ ವಿನಾಯಕನ ಆಕರ್ಷಕ ಶೋಭಯಾತ್ರೆ
ಸಂಜೆ 3 ಗಂಟೆಗೆ ಭಗವಾಧ್ವಜಾವರೋಹಣ ನಡೆದು ಬಳಿಕ ಶ್ರೀ ವಿನಾಯಕನ ಆಕರ್ಷಕ ಶೋಭಯಾತ್ರೆ ದೇವಾಲಯದಿಂದ ಹೊರಟು ಕಾವು ಪಂಚವಟಿನಗರ,ಶಿವನಗರದ ಮೂಲಕ ಸಾಗಿ ಆಮ್ಚಿನಡ್ಕ ಸೀರೆ ಹೊಳೆಯಲ್ಲಿ ವಿಗ್ರಹ ಜಲಸ್ತಂಭನ ನಡೆಯಲಿದೆ,ಬಳಿಕ ಸಂಜೆ 7 ಗಂಟೆಗೆ ಪಂಚಲಿಂಗೇಶ್ವರ ದೇವರಿಗೆ ಸೋಮವಾರ ಪೂಜೆ ನಡೆಯಲಿದೆ,ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿಯ ಅಧ್ಯಕ್ಷರಾದ ನವೀನ್ ನನ್ಯ ಪಟ್ಟಾಜೆ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು ಪ್ರಕಟನೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here