ಸೆ.7-9: ಕುಂಬ್ರ ಶ್ರೀ ರಾಮ ಭಜನಾ ಮಂದಿರದಲ್ಲಿ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ

0

ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ರಾಮಗಿರಿ ಶ್ರೀ ರಾಮ ಭಜನಾ ಮಂದಿರದಲ್ಲಿ 43 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಿಂದ ಆರಂಭಗೊಂಡು 9ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ. ಸೆ.7ರಂದು ಬೆಳಿಗ್ಗೆ ಶ್ರೀಗಣೇಶ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದ್ದು, ಬಳಿಕ ಗಣಪತಿ ಹೋಮ, ಸ್ಥಳೀಯ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮಹಿಳೆಯರಿಗೆ ರಂಗೋಲಿ, ಹೂ ಕಟ್ಟುವ ಸ್ಪರ್ಧೆ, ಭಕ್ತಿಗೀತೆ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಧಾರ್ಮಿಕ ರಸಪ್ರಶ್ನೆ ನಡೆಯಲಿದೆ. ಸಂಜೆ ಭಜನೆ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ, ಕುಣಿತ ಭಜನೆ ನಡೆಯಲಿದೆ.

ಸೆ.8ರಂದು ಬೆಳಿಗ್ಗೆ ಗಣಪತಿ ಹೋಮ, ವಾಗ್ದೇವಿ ಸಂಗೀತ ಶಾಲೆಯ ಗುರುಗಳಾದ ವಿದುಷಿ ಸವಿತಾ ಪುತ್ತೂರು ಇದರ ಶಿಷ್ಯರಿಂದ ಶಾಸ್ತ್ರೀಯ ಸಂಗೀತ, ಧಾರ್ಮಿಕ ಸಭೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಬೃಂದಾವನ ನಾಟ್ಯಾಲಯ ಕುಂಬ್ರ ಇವರಿಂದ ಕಾರ್ಯಕ್ರಮ ವೈವಿಧ್ಯ ನಡೆಯಲಿದೆ.ರಾತ್ರಿ ಭಜನೆ, ಸಾರ್ವಜನಿಕ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸೆ.9ರಂದು ಬೆಳಿಗ್ಗೆ ಗಣಪತಿ ಹೋಮ, ಶ್ರೀಸಿದ್ದಿವಿನಾಯಕ ಮ್ಯೂಸಿಕಲ್ ಟ್ರೂಪ್ ಕುಂಬ್ರ ಇವರಿಂದ ಭಕ್ತಿ ರಸಮಂಜರಿ, ಧಾರ್ಮಿಕ ಸಭೆ,ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಶ್ರೀ ಕೃಷ್ಣ ಯಕ್ಷಗಾನ ಕಲಾ ಸಂಘ ಕೌಡಿಚ್ಚಾರು ಇದರ ಬಾಲಪ್ರತಿಭೆಗಳಿಂದ ಯಕ್ಷಗಾನ ಬಯಲಾಟ ‘ಪಾಂಚಜನ್ಯ’ ನಡೆಯಲಿದೆ. ಸಂಜೆ ಭಜನೆ, ರಾತ್ರಿ ಮಹಾಪೂಜೆ, ಶ್ರೀಗಣೇಶ ವಿಗ್ರಹದ ಶೋಭಾಯಾತ್ರೆ ಆರಂಭಗೊಳ್ಳುವುದು, ಕುಂಬ್ರ ಕಟ್ಟೆ ಬಳಿ ಸ್ನೇಹ ಸಾಗರ ರಿಕ್ಷಾ ಚಾಲಕ ಮಾಲಕರ ಸಂಘದ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.


ರಾತ್ರಿಯ ಸಾಂಸ್ಕೃತಿಕ ಕಾರ್ಯಕ್ರಮಗಳು
ಸೆ.7ರಂದು ರಾತ್ರಿ ಸಾಂದೀಪನಿ ವಿದ್ಯಾಸಂಸ್ಥೆಗಳು ನರಿಮೊಗರು ಇದರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಸೆ.೭ ರಂದು ರಾತ್ರಿ ಮಂದಾರ ಕಲಾವಿದರು ಉಜಿರೆ ಅಭಿನಯಿಸುವ ತುಳು ಭಕ್ತಿ ಪ್ರಧಾನ ಹಾಸ್ಯಮಯ ನಾಟಕ ‘ ಮಾಯೊದ ತುಡರ್’ ಪ್ರದರ್ಶನಗೊಳ್ಳಲಿದೆ.


ಮಧ್ಯಾಹ್ನದ ಧಾರ್ಮಿಕ ಸಭಾ ಕಾರ್ಯಕ್ರಮಗಳು
ಸೆ.7ರಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು ಹಿಂದೂ ನಂಬಿಕೆಗಳ ಔಚಿತ್ಯ ಎಂಬ ವಿಷಯದಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ಭಾಸ್ಕರ ಆಚಾರ್ಯ ಹಿಂದಾರು ಮಾತನಾಡಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸೆ.8ರಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದ್ದು ಧರ್ಮ ಜಾಗೃತಿ ಎಂಬ ವಿಷಯದಲ್ಲಿ ಧಾರ್ಮಿಕ ಉಪನ್ಯಾಸಕ ವಾದಿರಾಜ ಕಲ್ಲೂರಾಯರವರು ಉಪನ್ಯಾಸ ನೀಡಲಿದ್ದಾರೆ. ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸೆ.9ರಂದು ಸಂಸದ ಬ್ರಿಜೇಶ್ ಚೌಟರವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದ್ದು, ಸನಾತನ ಆಚಾರ್ ವಿಚಾರ ಮತ್ತು ನಂಬಿಕೆ ಎಂಬ ವಿಷಯದಲ್ಲಿ ವಕೀಲರಾದ ಭಾಸ್ಕರ ಗೌಡ ಕೋಡಿಂಬಾಳ ಉಪನ್ಯಾಸ ನೀಡಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶೈಕ್ಷಣಿಕವಾಗಿ ಸಾಧನೆಗೈದ ಸ್ಥಳೀಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆಯೂ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮೋನಪ್ಪ ಪೂಜಾರಿ ಬಡಕ್ಕೂಡಿ, ಪ್ರಧಾನ ಕಾರ್ಯದರ್ಶಿ ನೇಮಿರಾಜ ರೈ ಕುರಿಕ್ಕಾರ, ಉಪಾಧ್ಯಕ್ಷ ರತನ್ ರೈ ಕುಂಬ್ರ, ಕೋಶಾಧಿಕಾರಿ ರಾಜ್‌ಪ್ರಕಾಶ್ ರೈ ಕುಂಬ್ರ, ಜತೆ ಕಾರ್ಯದರ್ಶಿ ಆಶಾಲತಾ ಎಂ ರೈ ಕುಂಬ್ರ, ಗೌರವ ಲೆಕ್ಕಪರಿಶೋಧಕ ಚಂದ್ರಕಾಂತ ಶಾಂತಿವನ, ಶ್ರೀ ಗಣೇಶೋತ್ಸವ ಸಮಿತಿ ಸಂಚಾಲಕ ರಾಜೇಶ್ ರೈ ಪರ್ಪುಂಜ ಹಾಗೇ ಕಾರ್ಯಕಾರಿ,ಸಲಹಾ ಸಮಿತಿಯ ಸರ್ವ ಸದಸ್ಯರುಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here