ಪುತ್ನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಪೋಷಕರ ಸಭೆ ಮತ್ತು ಭಗವದ್ಗೀತಾ ತರಗತಿ, ‘ಗೀತಾಮೃತಂ ‘ ಉದ್ಘಾಟನೆ ಮತ್ತು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ಗೌರವಿಸುವ ಕಾರ್ಯಕ್ರಮವನ್ನು ಸೆಪ್ಟೆಂಬರ್ 5 ರಂದು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಗೀತಾಮೃತಂ ತರಗತಿಯನ್ನು ಸಾಂಕೇತಿಕವಾಗಿ ಉದ್ಘಾಟಿಸಿ, ಮಕ್ಕಳಿಗೆ ಎಳವೆಯಿಂದಲೇ ಭಗವದ್ಗೀತೆಯನ್ನು ಕಲಿಸಬೇಕು ಎಂದು ಕರೆ ನೀಡುವುದರ ಮೂಲಕ ಅದರ ಶ್ರೇಷ್ಠತೆಯನ್ನು ವರ್ಣಿಸಿದರು.
ಬಳಿಕ, ಕಳೆದ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿಯಲ್ಲಿ ಶೇ.100 ಫಲಿತಾಂಶಕ್ಕೆ ಕಾರಣರಾದ ಶಿಕ್ಷಕರು ಹಾಗೂ ಶಿಕ್ಷಕೇತರ ವರ್ಗದ ಸಿಬ್ಬಂದಿಗಳನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಪಿ, ಶಾಲಾ ಅಧ್ಯಕ್ಷೆ ವಸಂತಿ ಕೆ, ಶಾಲಾ ಸಂಚಾಲಕ ಭರತ್ ಪೈ, ಸದಸ್ಯರಾದ ಶಂಕರಿ ಶರ್ಮ, ಪೋಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶೈಕ್ಷಣಿಕ ಸಲಹೆಗಾರರಾದ ಅನುರಾಧ ಶಿವರಾಮ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾಂಶುಪಾಲರಾದ ಸಿಂಧು ವಿ. ಜಿ. ಸ್ವಾಗತಿಸಿ, ಶಿಕ್ಷಕಿಯರಾದ ಅಪೂರ್ವ ಮತ್ತು ಗೀತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.