ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರರವರ ಅಧ್ಯಕ್ಷತೆಯಲ್ಲಿ ಸೆ.11 ರಂದು ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾ ಭವನದಲ್ಲಿ ನಡೆಯಲಿದೆ.
ಸಂಘದ ಸರ್ವ ಸದಸ್ಯರುಗಳು ಕ್ಲಪ್ತ ಸಮಯದಲ್ಲಿ ಹಾಜರಾಗಿ ಸಂಘದ ಬೆಳವಣಿಗೆಗೆ ಪೂರಕ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಸಂಘದ ಆಡಳಿತ ಮಂಡಳಿ ಅನುಮತಿ ಮೇರೆಗೆ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಬಿ.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.